ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನೆಹರೂರವರ ಭಾವಚಿತ್ರಕ್ಕೆ ಪುಷ್ಟ ನಮನವನ್ನು ಸಲ್ಲಿಸಿ, ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ನಂತರ ಶಿಕ್ಷಕ ವೃಂದದವರಿಂದ ವಿವಿಧ ನೃತ್ಯ, ಸಂಗೀತ ಕಾರ್ಯಕ್ರಮಗಳು ನೆರವೇರಿದವು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೆಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಮುಖ್ಯೋಪಾಧ್ಯಾಯಿನಿ ಈ ಶ್ರೀಮತಿ ಸುರೇಖಾ ರಾಜ್ ರವರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.