ಕಾರ್ಕಳಹೆಬ್ರಿ

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆಕ್ಟ್/ ಟ್ರಸ್ಟ್ ಆಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಸಂಸ್ಥೆಯು ನೋಂದಣಿ ಹೊಂದಿ ಕನಿಷ್ಠ 02 ವರ್ಷಗಳಾಗಿರಬೇಕು, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವ ಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹಾಗೂ ಸಂಸ್ಥೆಯು ಆಡಳಿತ ಮಂಡಳಿಯ ಕರ್ತವ್ಯಗಳನ್ನು ಮತ್ತು ಜವಾಬ್ದಾರಿಗಳನ್ನು ಸ್ಪಷ್ಟ ಹಾಗೂ ಖಚಿತವಾಗಿರುವ ಉಪನಿಯನಗಳನ್ನು ಹೊಂದಿರಬೇಕು. ಸಂಸ್ಥೆಯು ಆರ್ಥಿಕ ಸ್ಥಿತಿಗತಿಯು ಸಧೃಡವಾಗಿರಬೇಕು. ಯಾವುದೇ ಓರ್ವ ವ್ಯಕ್ತಿ ಹಾಗೂ ಜನಾಂಗದ ಲಾಭಕ್ಕಾಗಿ ಸಂಸ್ಥೆಯನ್ನು ನಡೆಸುತ್ತಿರಬಾರದು ಹಾಗೂ ಯಾವುದೇ ಜಾತಿ, ಪಂಥ, ಮತ ಮತ್ತು ಭಾಷೆಗಳನ್ನು ಪರಿಗಣಿಸದೇ ಎಲ್ಲರಿಗೂ ಸೌಲಭ್ಯ ಒದಗಿಸಬೇಕು.


ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಫುಟ್ ಬಾಲ್: ಜ್ಞಾನಸುಧಾದ ಪ್ರಣೀತ್ ರಾಷ್ಟ್ರಮಟ್ಟಕ್ಕೆ

Madhyama Bimba

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba

ಮಿಯ್ಯಾರು ಮಂಜಡ್ಕ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಸೌಮ್ಯ ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More