ಕಾರ್ಕಳಹೆಬ್ರಿ

ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಜಂಟಿ ವಾರ್ಷಿಕ ಕ್ರೀಡಾಕೂಟ- ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ: ಅಭಿನ್ ದೇವಾಡಿಗ

ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಕ್ರೀಡಾ ಪಟು ಅಭಿನ್ ದೇವಾಡಿಗ ಇವರು ಮಣಿಪಾಲದ ವಿದ್ಯಾನಗರದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜುಗಳು ಜಂಟಿಯಾಗಿ ಹಮ್ಮಿಕೊಂಡ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಮುಖ್ಯಅತಿಥಿಯಾಗಿ ಆಗಮಿಸಿದ್ದ ಶಿರೂರ್ ಶ್ರೀಧರ್ ಶೆಟ್ಟಿ ನಿವೃತ್ತದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕರ್ಣೆ ಇವರು ಮಾತನಾಡಿ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುವುದು ಆದ್ದರಿಂದ ಕ್ರೀಡೆಗೆ ದಿನದ ಒಂದಿಷ್ಟು ಸಮಯ ಮೀಸಲಿಡಬೇಕು. ವಿದ್ಯಾರ್ಥಿಗಳ ಪ್ರತಿಭೆಗೆಳ ಅನಾವರಣ ಇಂತಹ ಕ್ರೀಡಾಕೂಟದಿಂದ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ರಾಷ್ಟ್ರ ಮತ್ತುರಾಜ್ಯ ಮಟ್ಟದ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ರಾಷ್ಟ್ರಪ್ರಶಸ್ತಿ ವಿಜೇತ ಕ್ರೀಡಾ ಪಟು, ಅಭಿನ್‌ದೇವಾಡಿಗರವರಿಗೆ ಹಸ್ತಾಂತರಿಸಿದರು.

ಈ ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂತೋಶ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು, ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಅರುಣ್ ಕುಮಾರ್ ವಂದಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

ಟೇಕ್ವಾಂಡೊದಲ್ಲಿ ಸತ್ಯಪ್ರಸಾದ್‌ಗೆ ಚಿನ್ನದ ಪದಕ

Madhyama Bimba

ವರಂಗದ ಪ್ರಭಾಕರ ನಾಪತ್ತೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More