ಹೆಬ್ರಿ : ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ದೇವರ ಸನ್ನಿಧಿಯಲ್ಲಿ ದೀಪೋತ್ಸವ, ಶ್ರೀ ರಾಮ ನಾಮ ಸಂಕೀರ್ತನೆ, ವಿಶೇಷವಾಗಿ 108 ಆರತಿ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ಗುರುವಾರ ನಡೆಯಿತು.
ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ ಇವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರ ಪರವೂರ ನೂರಾರು ಭಕ್ತರು ಸೇವೆಯಲ್ಲಿ ಪಾಲ್ಗೊಂಡಿದ್ದರು.