ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಉಪನಿರ್ದೇಶಕರ ಕಚೇರಿ ಬಳ್ಳಾರಿ, ಜಿಲ್ಲಾ ಪಂಚಾಯತ್ ಬಳ್ಳಾರಿ ಇವರ ವತಿಯಿಂದ ಬಳ್ಳಾರಿಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕ ಮತ್ತು ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಮೀರಲ್ ಡಿ’ಮೆಲ್ಲೊ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಅಮೋಘ್ ಶೆಟ್ಟಿ ಪ್ರತಿನಿಧಿಸಿದ್ದರು.
ಇದರಲ್ಲಿ ಮೀರಲ್ ಡಿ’ಮೆಲ್ಲೊ ಸತತ ಎರಡನೇ ಬಾರಿಗೆ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ ಸಾಧನೆಗೈದಿದ್ದಾಳೆ.