ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಡಿಸೆಂಬರ್ 9 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಪ್ರವರ್ಗ ಸಿ ದೇವಸ್ಥಾನಗಳು : ಕಾರ್ಕಳ ತಾಲೂಕು ತೆಳ್ಳಾರು ಗ್ರಾಮದ ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಮಾಳ ಹಳೆಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರುಪ್ರಕಟಣೆ ಹಾಗೂ ತೆಳ್ಳಾರು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಮರು ಪ್ರಕಟಣೆ, ಬ್ರಹ್ಮಾವರ ತಾಲೂಕು ಹೊಸಾಳ ಬದನಗೋಳಿ ಶ್ರೀ ಬ್ರಹ್ಮ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ, ಬೈಂದೂರು ತಾಲೂಕು ಬಿಜೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸದಸ್ಯ ಸ್ಥಾನಕ್ಕೆ ಮರು ಪ್ರಕಟಣೆ ಹೊರಡಿಸಲಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.