ಕಾರ್ಕಳ: ನೀರೆ ಹೆದ್ದಾರಿ ಬಳಿ ನಡೆದ ಕಾರು ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರ ಮೃತ್ಯುವಿಗೀಡಾದ ಘಟನೆ ಡಿ. 5ರಂದು ನಡೆದಿದೆ.
ಕಾರು ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಶಂಕರ್ ಶೆಟ್ಟಿ (71) ಎಂಬವರು ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ಶಂಕರ್ ಶೆಟ್ಟಿ ಬೈಲೂರು ಕಡೆಯಿಂದ KA 20 EA 8289 ನೇ ನಂಬ್ರದ ಮೋಟಾರ್ ಸೈಕಲನ್ನು ಸವಾರಿ ಮಾಡಿಕೊಂಡು ಬಂದು ರಸ್ತೆಯಲ್ಲಿ ಇಂಡಿಕೇಟರ್ ಹಾಕಿ ನಿಲ್ಲಿಸಿಕೊಂಡಿದ್ದು, ಈ ಸಮಯ ಹಿರಿಯಡ್ಕ ಕಡೆಯಿಂದ ಬೈಲೂರು ಕಡೆಗೆ KA 02 MC 1628 ನೇ ನಂಬ್ರದ ಕಾರನ್ನು ಅದರ ಚಾಲಕನು ಅತೀವೇಗ ಹಾಗೂ ಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯಲ್ಲಿ ಇಂಡಿಕೇಟರ್ ಹಾಕಿ ನಿಲ್ಲಿಸಿದ್ದ ಮೋಟಾರ್ ಸೈಕಲಿಗೆ ಎದುರುಗಡೆಗೆ ಡಿಕ್ಕಿ ಹೊಡೆದಿದ್ದು ನಂತರ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಯಲ್ಲಿ ಬಿದ್ದಿರುತ್ತದೆ.
ಕಾರು ಡಿಕ್ಕಿ ಹೊಡೆದ ಪರಿಣಾಮ ಶಂಕರ ರವರು ಮೋಟಾರ್ ಸೈಕಲ್ ಸಮೇತ ಡಾಮಾರು ರಸ್ತೆಗೆ ಬಿದ್ದು, ಗಂಭೀರ ಸ್ವರೂಪ ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಶಂಕರ ರವರನ್ನು ಪರೀಕ್ಷಿಸಿದ ವೈದ್ಯರು ಶಂಕರ ಶೆಟ್ಟಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.