ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ವಲಯ ಶ್ರೀಮದ್ ಭುವನೇಂದ್ರ ಶಾಲೆ, ಕಾರ್ಕಳ ಇವರ ಸಹಯೋಗದೊಂದಿಗೆ ನಡೆದ2024-25ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಲ್ಯೊಟ್ಟು ಗುರುಕೃಪಾ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಗಾನ್ವಿ ಯು ಮೂಲ್ಯ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕರಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಯವರು ಹಾಗೂ ಶಿಕ್ಷಕ ವೃಂದ ಹಾರೈಸಿ ಅಭಿನಂದಿಸಿರುತ್ತಾರೆ.