ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಛೇರಿ, ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇವರ ಸಹಯೋಗದೊಂದಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ರಿತು ಅವರು ಮಂಗನ ಕಾಯಿಲೆ ಬಗ್ಗೆ ಮಾಹಿತಿ ನೀಡಿದರು. ಈ ರೋಗದ ಲಕ್ಷಣಗಳು, ಅದಕ್ಕಿರುವ ಔಷಧೋಪಚಾರದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಸತ್ತ ಮಂಗವೇನಾದರೂ ಕಂಡು ಬಂದರೆ ಪಂಚಾಯತ್‌ಗೆ ತಿಳಿಸಬೇಕು. ಈ ಕಾಯಿಲೆಯನ್ನು ಸೂಕ್ತ ಚಿಕಿತ್ಸೆಯಿಂದ ಗುಣಪಡಿಸಬಹುದು ಎಂದು ಹೇಳಿದರು.
ಡಾ. ಸಂಜಯ್, ರಿತೇಶ್, ಉಪ ಪ್ರಾಂಶುಪಾಲೆ ವಾಣಿ.ಕೆ, ಅಕಾಡೆಮಿಕ್ ಅಡ್ವೈಸರ್ ಶಾರದಾ ಅಂಬರೀಶ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಂಗ್ಲ ಭಾಷಾ ಉಪನ್ಯಾಸಕಿ ದರ್ಶಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.