ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ. ಕೃಷ್ಣರವರು ಡಿ. 10ರಂದು ನಿಧನರಾಗಿದ್ದು, ಅವರ ಗೌರವಾರ್ಥವಾಗಿ ಡಿ. 11ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶಿಸಿದೆ.
ಡಿ. 10 ರಿಂದ 12ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಆಚರಿಸುವಂತೆ ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ಮಾಡದಂತೆ ಇದರೊಂದಿಗೆ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಸರಕಾರದ ಉಪಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.