ಕಾರ್ಕಳದ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ಬಳಿಯ ಹರಿಯಪ್ಪನ ಕೆರೆಯ ಅಪಾಯಕಾರಿ ದುಗ್ಗಂಟ್ರಾಯ ತಿರುವಿನಲ್ಲಿ ಇಂದು ಸಂಜೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಚಿದ್ರವಾಗಿದೆ
ಬೈಕ್ ಸವಾರ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಪಿಕಪ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದರು.
ಅಪಘಾತಕ್ಕೀಡಾದ ಬೈಕ್ ನೆಲ್ಲಿಕಟ್ಟೆಯ ಲಾರೆನ್ಸ್ ಅಲ್ಮೇಡಾ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಕಾರ್ಕಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.