ಕಾರ್ಕಳಹೆಬ್ರಿ

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.


ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.


ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನು?ನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ ಈ ಪ್ರಶಸ್ತಿ ಸಂದಿದೆ.

Related posts

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಕಾರ್ಕಳ ತಾಲೂಕು ಘಟಕದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ

Madhyama Bimba

ಹೆಬ್ರಿ: ಅನಾರೋಗ್ಯ- ಆತ್ಮಹತ್ಯೆ

Madhyama Bimba

ಸಾಣೂರು ಸಹಕಾರಿ ಸಂಘ: ಅಧ್ಯಕ್ಷರಾಗಿ ಜಾನ್ ಆರ್ ಡಿಸಿಲ್ವ, ಉಪಾಧ್ಯಕ್ಷರಾಗಿ ರಘುಚಂದ್ರ ಜೈನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More