ಮಂಗಳೂರಿನಿಂದ ಮೂಡುಬಿದಿರೆಯಾಗಿ ಕಾರ್ಕಳಕ್ಕೆ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ ಸೇವೆಗೆ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಪುರಸಭೆ ಅಧ್ಯಕ್ಷ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಮುಖಂಡರಾದ ರಂಜಿತ್ ಪೂಜಾರಿ, ಈಶ್ವರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರದ ಜನರ ಹಾಗೂ ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಂಡಿದೆ.