ಮಂಗಳೂರು ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪ್ರಾರಂಭ ಮಾಡಿದ ಕೆ. ಎಸ್ ಆರ್ ಟಿ ಸಿ ಬಸ್ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು.
ಮುಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪುರಸಭೆ ಸದಸ್ಯ ರಾದ ಪುರಂದರ ದೇವಾಡಿಗ, ಸುರೇಶ್ ಕೋಟ್ಯಾನ್,ಪಕ್ಷದ ವಕ್ತಾರ ರಾಜೇಶ್ ಕಡಲಕೆರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಪ್ರಿಯಾ ದಿಲೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಗ್ಯಾರಂಟಿ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.