ಕಾರ್ಕಳಹೆಬ್ರಿ

ಡಿ. 19: ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಡಿಸೆಂಬರ್ 19ರಂದು ಬೆಳಗ್ಗೆ 11.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು / ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಡಿಸೆಂಬರ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳದ ಜ್ಯುವೆಲ್ಲರಿಯಿಂದ ಚಿನ್ನ ಲಪಟಾವಣೆ

Madhyama Bimba

ನಿಟ್ಟೆ: ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ-2024

Madhyama Bimba

ಕಾರ್ಕಳ ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್‌ನಲ್ಲಿ ವಿಶೇಷ ಬೋನಸ್ ಸ್ಕೀಮ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More