ನೀರೆ ಅಂಚೆ ಕಛೇರಿಯ ಶಾರದ ವೇದಿಕೆಯ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ. 18ರಂದು ನಡೆದಿದೆ.
ಬೈಕ್ ಸವಾರ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಜು (70) ಮೃತಪಟ್ಟ ದುರ್ದೈವಿ.
ಲಾರಿ ಚಾಲಕ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆ ಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಜು ರವರು ಮೋಟಾರ್ ಸೈಕಲ್ ಸಮೇತ ಡಾಮಾರು ರಸ್ತೆಗೆ ಬಿದ್ದು, ಗಂಭೀರ ಸ್ವರೂಪ ಗಾಯಗೊಂಡಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.