ಕಾರ್ಕಳ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ. 2024- 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ 22 ಡಿಸೆಂಬರ್ 2024 ಆದಿತ್ಯವಾರದಂದು ನಡೆಯಲಿದೆ.


ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್‌ಗೆ (155) ರೂ 2,000/- ದಂತೆ ಭಾರತೀಯ ಸೆನೆಗೆ ರೂ,3,10,000/- ವನ್ನು ದೇಣಿಗೆಯಾಗಿ ನಿಡಲಾಗುವುದು. ಒಟ್ಟು 3 ನೇ ಹಂತದಲ್ಲಿ ಇದೀಗ 7,47,500 ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಗುವುದು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರಾದ  ವಿ.ಸುನಿಲ್ ಕುಮಾರ್ ಅವರು ವಹಿಸಲಿದಾರೆ. ಮುಖ್ಯ ಅತಿಥಿಗಳಾಗಿ ಎಂ.ಆರ್.ಜಿ.ಗ್ರೂಪ್‌ಗಳ ಸಂಸ್ಥಾಪಕ ಹಾಗೂ ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕರಾದ ಪ್ರಸನ್ನ ಹೆಚ್. ಐ.ಎ.ಎಸ್. ಹಾಗೂ ಸಂಸ್ಥೆಯ ಪೂರ್ವ ವಿದ್ಯಾರ್ಥಿ ಐ.ಎಂಎಸ್. ಬನಾರಸ್, ವಾರಣಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಗೌತಮ್‌ಭಟ್ ಎಂ.ಬಿ.ಬಿ.ಎಸ್. ಎಂ.ಎಸ್. ಎಂ.ಸಿಹೆಚ್.( ಸರ್ಜಿಕಲ್‌ಆಂಕೋಲಜಿ) ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Related posts

ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

Madhyama Bimba

ಸಾರ್ವಜನಿಕ ಕಾರ್ಯಕ್ರಮಗಳಿಗೆ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ ಆದೇಶ

Madhyama Bimba

ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ಹಾಗೂ ಅನುದಾನ ವಿತರಣಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More