ಕಡ್ತಲ ಗ್ರಾಮ ಪಂಚಾಯತ್‌ನ ಗ್ರಾಮಸಭೆಯು ಡಿ. 19ರಂದು ಪಂಚಾಯತ್ ಅಧ್ಯಕ್ಷರಾದ ಸುಕೇಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪ್ರಥಮ ಹಂತದ ಗ್ರಾಮ ಸಭೆ ಜರುಗಿತು.
ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಮಾಹಿತಿಯನ್ನು ಜನರಿಗೆ ತಿಳಿಸಿದರು.
ಕಾಡು ಪ್ರಾಣಿಗಳಿಂದ ರೈತರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತಿದ್ದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದರು. ಹಾಗೂ ರುದ್ರಭೂಮಿಯ ವ್ಯವಸ್ಥೆ ಇಲ್ಲದಿರುವುದು ಮುಂದಿನ ದಿನಗಳಲ್ಲಿ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಗೆ ರುದ್ರಭೂಮಿಯನ್ನು ರಚಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಪ್ರಕೃತಿ ವಿಕೋಪದಿಂದ ಸಮಸ್ಯೆಗೊಳಗಾದವರಿಗೆ ಮತ್ತು ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಗ್ರಾಮ ಪಂಚಾಯತ್ ವತಿಯಿಂದ ಶೇ. ೨೫ರಷ್ಟು ಸಹಾಯಧನ ವಿತರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ಮಾತನಾಡಿ ಕಿಂಡಿ ಅಣೆಕಟ್ಟಿನ ನಿರ್ಮಾಣದಿಂದ ರೈತರಿಗೆ ಪ್ರಯೋಜನವಾಗುತ್ತಿದ್ದು ತಮ್ಮ ಅಧ್ಯಕ್ಷಾವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಿದರು. ಗ್ರಾಮಸ್ಥರು ಪಂಚಾಯತ್‌ನ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವಂತೆ ತಿಳಿಸಿದರು.
ಗ್ರಾಮಸಭೆಯ ನೋಡೆಲ್ ಅಧಿಕಾರಿಯಾಗಿ ಸುರೇಂದ್ರನಾಥ್ ಎಂ. ವಿ., ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಶಾಂತಾ ರೀತಿಯಲ್ಲಿ ಗ್ರಾಮಸಭೆಯನ್ನು ನಡೆಯಲು ಗ್ರಾಮಸ್ಥರು ಸಹಕರಿಸಿದರು.
ಕಾರ್ಯದರ್ಶಿ ಅರುಂಧತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಸ್ವಾಗತಿಸಿ, ಧನ್ಯವಾದವಿತ್ತರು.