ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಬೈಲೂರು ವಲಯದ ಕಣಜಾರು ಕಾರ್ಯಕ್ಷೇತ್ರದಲ್ಲಿ ವಾತ್ಸಲ್ಯ ಮನೆ ನಿರ್ಮಾಣದ ಪೂರ್ವಭಾವಿಯಾಗಿ ಗುದ್ದಲಿ ಪೂಜೆ ಯನ್ನು ಕಣಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಗುರುರಾಜ್ ಮಂಜಿಂತ್ತಾಯ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಿಕ್ರಂ ಹೆಗ್ಡೆ, ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಸುಧೀರ್ ಹೆಗ್ಡೆ, ಜನಜಾಗೃತಿ ಸದಸ್ಯರಾದ ತಾರನಾಥ್ ಶೆಟ್ಟಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ, ವಾತ್ಸಲ್ಯ ಮನೆ ನಿರ್ಮಾಣ ಜಾಗದ ದಾನಿಗಳಾದ ಪಟೇಲರ ಮನೆ ವಿವೇಕಾನಂದ ಹೆಗ್ಡೆ, ದೇವಸ್ಯ ಮನೆ ಮಂಜುನಾಥ್ ಹೆಗ್ಡೆ, ಮಹೇಶ್ ಶೆಟ್ಟಿ, ಶಶಿಧರ್ ಶೆಟ್ಟಿ, ಬೈಲೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ, ಕಣಜಾರು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ್, ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ಸಲಾಂ, ವಾತ್ಸಲ್ಯ ಮನೆಯ ಫಲಾನುಭವಿ ಶ್ರೀಮತಿ ಗಿರಿಜಾ ಶೆಟ್ಟಿ , ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು , ಸ್ಥಳೀಯ ಗಣ್ಯರು, ಸ್ಥಳೀಯರು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.