ಕಾರ್ಕಳಹೆಬ್ರಿ

ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ.

ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded”ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.


ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತ- ಆನ್‌ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತ – ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡುವುದು, ಮೂರನೇ ಹಂತ – ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ – ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.


ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Related posts

ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು- ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ವೀಲ್ ಚಯರ್ ವಿತರಣೆ

Madhyama Bimba

ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Madhyama Bimba

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More