ಕಾರ್ಕಳಹೆಬ್ರಿ

ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷ ದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ತರಬೇತಿ ವಿವರ : ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಐದನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 15 ಹಾಗೂ ಪರಿಶಿಷ್ಟ ಪಂಗಡದ -5 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಠ ದ್ವಿತೀಯ ಪಿ.ಯು.ಸಿ ಉತ್ತೀರ್ಣ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಗುರಿ- 147 ಹಾಗೂ ಪರಿಶಿಷ್ಟ ಪಂಗಡದ – 89 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿ ಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿ ಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬ ಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಫೆ.23ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ ಪಂದ್ಯಾಟ

Madhyama Bimba

ಶ್ರದ್ಧಾಂಜಲಿ ಸಭೆ

Madhyama Bimba

ಜ. 18,19: ಸಾಣೂರು ಯುವಕ ಮಂಡಲಕ್ಕೆ 71ರ ಸಂಭ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More