ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾವೇರಡ್ಕ ಬಳಿಯ ಸ್ವರ್ಣ ನದಿಯ ಸರಕಾರಿ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮರಳು ತೆಗೆಯುತ್ತಿದ್ದ ವ್ಯಕ್ತಿಗಳನ್ನು ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಡಿ. 26ರಂದು ನಡೆದಿದೆ.
ಆರೋಪಿತರಾದ ಪ್ರಸಾದ್ ನಾಯಕ್, ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸೇರಿಕೊಂಡು ಮರಳನ್ನು ಲಾರಿಗೆ ತುಂಬಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಜಯಂತ್ ದಾಳಿ ಮಾಡಿ ಮರಳುಗಾರಿಕೆಗೆ ಉಪಯೋಗಿಸುತ್ತಿದ್ದ ಟಿಪ್ಪರ್ ಲಾರಿ, ಹಾರೆ, ಪ್ಲಾಸ್ಟಿಕ್ ಬುಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.