ಪಡಿ ಸಂಸ್ಥೆ ಮಂಗಳೂರು ಹಾಗೂ ಪೋಲೀಸ್ ಇಲಾಖೆ ಕಾರ್ಕಳ ಇದರ ಸಹಯೋಗದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಡಿ. 21ರಂದು ನಡೆಯಿತು.
ಪಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶೋಭಾ ಭಾಸ್ಕರ್, ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಹಾಗೂ ಪೋಕ್ಸೋ ಕಾಯಿದೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ಪೊಲೀಸ್ ಠಾಣೆ ಎಎಸ್‌ಐ ರತ್ನಾಕರ್ ಹಾಗೂ ಎ ಎಸ್ ಐ ಕೃಷ್ಣ ಆಚಾರ್ಯ ರವರು ವಿದ್ಯಾರ್ಥಿಗಳಿಗೆ ಉದಾಹರಣೆಯ ಸಹಿತ ಮಾದಕ ವಸ್ತುಗಳಿಗೆ ದಾಸರಾಗದೆ ಯೋಗ್ಯ ಜೀವನ ನಡೆಸುವಂತೆ ಕರೆ ನೀಡಿದರು.
ಪೋಲಿಸ್ ಕಾನ್ಸ್ಟೇಬಲ್ ಶ್ರೀಮತಿ ಸಂಪಾ ಶೆಟ್ಟಿ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ಧರಿಸುವಂತೆ ಮತ್ತು ಅಪಘಾತಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಇಡ್ಯಾ ಜನಾರ್ಧನ್ ಅಧ್ಯಕ್ಷತೆ ವಹಿಸಿದ್ದರು.
ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಫ್ಯಾನಿ ಜೋಯ್ಸ್. ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಅಶ್ವಿನಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.