ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಗಳನ್ನು ಒದಗಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ತರಬೇತಿ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಕನಿಷ್ಠ 21 ರಿಂದ 35 ವರ್ಷದೊಳಗಿನ ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯ ದಲ್ಲಿ ಕೆಲಸ ಮಾಡಿರುವ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸ ಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ಮೂಲ ದಾಖಲೆಗಳೊಂದಿಗೆ ಡಿಸೆಂಬರ್ 31 ರ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸ ಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.