ಕಾರ್ಕಳ ತಾಲೂಕು ಕೊಳಕ್ಕೆ ಇರ್ವತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳಿಯ ಹಾಗೂ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ. ಎನ್. ರಾಜೇಂದ್ರ ಕುಮಾರ್‌ರವರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್, ಪಂಚಾಯತ್ ಅಧ್ಯಕ್ಷರಾದ ಭರತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಉದಯ ಎಸ್ ಕೋಟ್ಯಾನ್, ಮುಂಬೈ ಸಮಿತಿಯ ಅಧ್ಯಕ್ಷರಾದ ಸದಾನಂದ ಎಸ್ ಪೂಜಾರಿ ಮತ್ತು ಶಾಲೆಯ ದೈಹಿಕ ಶಿಕ್ಷಕರಾದ ಆನಂದ ಪೂಜಾರಿ ಉಪಸ್ಥಿತರಿದ್ದರು.