ಕಾರ್ಕಳ

ನಿಟ್ಟೆ: ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ-2024

ನಿಟ್ಟೆ ಪರಿಗಣೆತ ವಿಶ್ವವಿದ್ಯಾಲಯದ ಅಧೀನ ಸಂಸ್ಥೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ – 2024 ಡಿ. 28ರಂದು ಜಸ್ಟೀಸ್ ಕೆ. ಎಸ್. ಹೆಗ್ಡೆ ಉದ್ಯಮಾಡಳಿತ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿಟ್ಟೆ ವಿದ್ಯಾಸಂಸ್ಥೆಯ ಮಾರ್ಗದರ್ಶಕರು, ಕರ್ನಾಟಕ ವಿಧಾನಪರಿಷತ್ ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಹಾಗೂ ಹಳೆ ವಿದ್ಯಾರ್ಥಿಗಳ ಸಂಘಟನೆಗಳ ನಿರ್ದೇಶಕರಾಗಿರುವ ಪ್ರಸನ್ನ ಆರ್. ಕೈಲಾಜೆ ಉಪಸ್ಥಿತರಿದ್ದರು.


ಮುಖ್ಯ ಅತಿಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಪೂರ್ವ ವಿದ್ಯಾರ್ಥಿಗಳು ಕಲಿತ ಸಂಸ್ಥೆಯ ಜೊತೆ ನಿಕಟ ಸಂಬಂಧವಿರಿಸಿಕೊಂಡು ವರ್ಷದಲ್ಲಿ ಕನಿಷ್ಠ ಒಮ್ಮೆಯಾದರೂ ಭೇಟಿ ನೀಡುವ ಜೊತೆಯಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಕರೆ ನೀಡಿದರು.


ಇನ್ನೋರ್ವ ಮುಖ್ಯ ಅತಿಥಿ ಪ್ರಸನ್ನ ಆರ್. ಕೈಲಾಜೆ ಹಿರಿಯ ವಿದ್ಯಾರ್ಥಿ ಸಂಘಟನೆಯ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 21 ಪೂರ್ವ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

ಈ ಹಿಂದೆ ಕಾರ್ಯ ನಿರ್ವಹಿಸಿರುವ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿಶ್ವದೆಲ್ಲೆಡೆ ನೆಲೆಸಿರುವ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಮಾರಂಭದ ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕ್ರೀಡೆಗಳು ನಡೆದವು.

ಪೂರ್ವ ವಿದ್ಯಾರ್ಥಿನಿ ಶ್ರೀಮತಿ ಅನುರಾಧಾ ಭಟ್ ಪ್ರಾರ್ಥಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದರ್ವಿಶ್ ಮಮ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ವೀಣಾ ಬಿ.ಕೆ ಸ್ವಾಗತಿಸಿದರು. ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಹಾಯಕ ಗ್ರಂಥಪಾಲಕ ಸತೀಶ್ ಶೆಟ್ಟಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸಭೆಗೆ ಪರಿಚಯಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಟ್ಟೆ ಉದ್ಯಮಾಡಳಿತ ಸಂಸ್ಥೆಯ ನೂತನ ನಿರ್ದೇಶಕ ಡಾ. ಸುಧೀರ್ ಎಂ. ವಂದಿಸಿದರು. ಶ್ರೀಮತಿ ಚೈತ್ರ ಕುಡ್ವ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಚರಿತ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಗೈದರು.

ಉಪನ್ಯಾಸಕರಾದ ಡಾ. ದಯಾನಂದ ಬಾಯಾರ್, ಹಳೆ ವಿದ್ಯಾರ್ಥಿ ಸಂಘದ ಸಂಯೋಜಕರಾದ ಶ್ರೀಮತಿ ಅರ್ಚನಾ ಭಟ್ ಹಾಗೂ ಇತರರು ಸಹಕರಿಸಿದರು.

ಈ ಸಂದರ್ಭದಲ್ಲಿ 2024-25 ರಿಂದ 2025-26ರ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಶ್ರೀಮತಿ ಚೈತ್ರ ಕುಡ್ವ, ಉಪಾಧ್ಯಕ್ಷರಾಗಿ ಅಬ್ದುಲ್ ರಜಾಕ್, ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ, ಖಜಾಂಚಿಯಾಗಿ ಶ್ರೀಮತಿ ಅರ್ಚನಾ ಭಟ್ ಹಾಗೂ 9 ಮಂದಿಯನ್ನೊಳಗೊಂಡ ಕಾರ್ಯಕಾರಿ ಸಮಿತಿ ಆಯ್ಕೆಗೊಂಡರು.

Related posts

ಕ್ರೈಸ್ಟ್‌ಕಿಂಗ್: ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ- ಪರೀಕ್ಷೆ ಬರೆದ ಐದು ವಿದ್ಯಾರ್ಥಿಗಳಲ್ಲಿ ನಾಲ್ವರು ಉತ್ತೀರ್ಣ

Madhyama Bimba

ಕುಕ್ಕುಂದೂರು: ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ

Madhyama Bimba

ಮೂಗು ಹಾಗೂ ಬಾಯಲ್ಲಿ ರಕ್ತ ಬಂದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More