ಕಾರ್ಕಳಹೆಬ್ರಿ

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು ಹಾಗೂ 283 ಹಿರಿಯ ನಾಗರಿಕರು ವಿವಿಧ ಸಾಧನ ಸಲಕರಣೆಗಳನ್ನು ಪಡೆಯಲು ಅಲಿಂಕೋ ಸಂಸ್ಥೆಯಿಂದ ಆಯ್ಕೆ ಮಾಡಲಾಗಿರುತ್ತದೆ.


ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಅಲಿಂಕೋ ಸಂಸ್ಥೆ ವತಿಯಿಂದ ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ತರಬೇಕು.


ಹೆಚ್ಚಿನ ಮಾಹಿತಿಗಾಗಿ ತಾಲೂಕು ವ್ಯಾಪ್ತಿಯಲ್ಲಿ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿ.ಆರ್.ಡಬ್ಲ್ಯೂ, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯು.ಆರ್.ಡಬ್ಲ್ಯೂ ಅಥವಾ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 0820-2574810, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ದೂ.ಸಂಖ್ಯೆ: 0820-2533372 ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ: 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ರಿದಮ್ ಡ್ಯಾನ್ಸ್ ತಂಡದ ವಾರ್ಷಿಕ ಕ್ರೀಡಾಕೂಟ

Madhyama Bimba

ಎಂ.ಪಿ.ಎಂ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ

Madhyama Bimba

ಫಲಪುಷ್ಪ ಪ್ರದರ್ಶನ: ಮಳಿಗೆ ತೆರೆಯಲು ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More