ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಜನವರಿ 5 ರಿಂದ 6 ರ ವರೆಗೆ ದಾವಣಗೆರೆ ಜಿಲ್ಲೆಯಲ್ಲಿ ನಡೆಯಲಿದೆ.
ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವ ಸ್ಪರ್ಧಿಗಳು ಜನವರಿ 5 ರಂದು ಬೆಳಗ್ಗೆ 9.30 ಗಂಟೆಯೊಳಗೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ದೂ.ಸಂಖ್ಯೆ: 9845432303 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.