ಕಾರ್ಕಳಹೆಬ್ರಿ

ದೆಹಲಿಯಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಇನ್ನಾದ ಮನು ಶೆಟ್ಟಿ ಆಯ್ಕೆ

ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂ ನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ.

ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ. ಪಂ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿಯವರ ಪುತ್ರಿ ಯಾಗಿದ್ದಾರೆ.

ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ರಾಷ್ಟ್ರೀಯ ಮಟ್ಟದ ಯುವ ಪ್ರತಿಭೆಗಳ ೨ ದಿನ ದ ಅಧಿವೇಶನ ದೆಹಲಿಯಲ್ಲಿ ಜನವರಿ 11, ಮತ್ತು 12 ರಂದು ನಡೆಯಲಿದ್ದು ಭಾರತಾದ್ಯಂತದ 3 ಸಾವಿರ ಯುವಕ ಯುವತಿಯರು ಆಯ್ಕೆಯಾಗಿದ್ದಾರೆ.

ದೇಶದ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರದ ವಿವಿಧ ಇಲಾಖಾ ಮಂತ್ರಿಗಳು, ಅಧಿಕಾರಿಗಳು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪರಿಣಿತರೊಂದಿಗೆ ಸಂವಾದ ನಡೆಯಲಿದೆ.

ಮನು ಶೆಟ್ಟಿಯವರು ಉಡುಪಿ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿಯಾಗಿದ್ದು, ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಪಡುಬಿದ್ರಿಯ ಸಕ್ರೀಯ ಸದಸ್ಯೆಯಾಗಿದ್ದಾರೆ.

Related posts

ಮಣಿಪಾಲ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba

ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ಶಿವಪುರದ ಸುಗಂಧಿ ನಾಯ್ಕ್ ಆಯ್ಕೆ

Madhyama Bimba

ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ವೈದ್ಯಕೀಯ ನೆರವು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More