ಅಕ್ರಮ ಮರಳು ಸಾಗಾಟ ಸಂಬಂಧಿಸಿದಂತೆ ಕಾರ್ಕಳ ಹಾಗೂ ಕೌಡೂರಿನಲ್ಲಿ ಜ. 3ರಂದು 2 ಪ್ರಕರಣಗಳು ದಾಖಲಾಗಿವೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ವಾಹನ ತಪಾಸಣೆ ಮಾಡುತ್ತಿರುವಾಗ ಆರೋಪಿಗಳು ಕೆಎ-19 ಡಿ-9245 ನೇ ನಂಬ್ರದ ಟಿಪ್ಪರ ಲಾರಿಯಲ್ಲಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿದ್ದು ಈ ಸಂದರ್ಭ ಪೊಲೀಸರನ್ನು ಕಂಡು ಕಳವು ಮಾಡಿದ ಮರಳಿನೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭ ಪೊಲೀಸರು ತಡೆದು ಮರಳು ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ಸಂದರ್ಭ ಬೈಲೂರು ಕಡೆಯಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮರಳು ತುಂಬಿದ ಲಾರಿ ಆಗಿರುವುದರಿಂದ ಲಾರಿ ಹಾಗೂ ಮರಳನ್ನು ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾರೆ.
ಈ ಎರಡು ಪ್ರಕರಣಗಳು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.