5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿಯವರು ಜ.3ರಂದು ಉಡುಪಿ ಜಿಲ್ಲೆಗೆ ಅಧಿಕೃತ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್‌ರವರು ಭೇಟಿಯಾಗಿ ನಂದಿನಿ ಹೊಸ ವರ್ಷದ ಡೈರಿ ಮತ್ತು ಸಿಹಿ ಉತ್ಪನ್ನಗಳನ್ನು ನೀಡಿ, ಸ್ವಾಗತಿಸಿದರು.
ಕರ್ನಾಟಕ ಪಂಚಾಯತ್ ರಾಜ್ ಪರಿಷತ್ (ರಿ.), ಬೆಂಗಳೂರು ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗಾಗಿ ಒಟ್ಟಾಗಿ ಕೆಲಸ ಮಾಡಿರುವ ನೆನಪುಗಳನ್ನು ಸಿ. ನಾರಾಯಣಸ್ವಾಮಿಯವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಗ್ರಾಮೀಣ ಭಾಗದಲ್ಲಿ ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಸಹಕಾರಿ ಸಂಸ್ಥೆಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕಾದ ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು. 5ನೇ ರಾಜ್ಯ ಹಣಕಾಸು ಆಯೋಗದ 2024-25 ನೇ ಸಾಲಿನ ವರದಿಯ ಪುಸ್ತಕವನ್ನು ನೀಡಿ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲ, ಕಾರ್ಕಳ ಪೀಕಾರ್ಡ್ ಬ್ಯಾಂಕಿನ ನಿರ್ದೇಶಕರಾದ ರಘುವೀರ ಶೆಣೈಯವರು ಉಪಸ್ಥಿತರಿದ್ದರು.