ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ )ಕಾರ್ಕಳ ತಾಲೂಕು ಸಾಣೂರು ವಲಯದ ” ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಸಾಣೂರು ಇಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮಾಧವ ಭಂಡಾರ್ಕರ್ ವಹಿಸಿದ್ದರು,
ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶೋಭಾ ಭಾಸ್ಕರ್ ವಿದ್ಯಾರ್ಥಿಗಳಿಗೆ ದುಶ್ಚಟಗಳಿಗೆ ಬಲಿಯಾಗದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಎಂದು ಮಾರ್ಗದರ್ಶನ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಲವೀನಾ ಮೇಲ್ವಿಟಾ ನೋರೋನ್ಹ ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಯೋಜನೆಯ, ” ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅತೀ ಅಗತ್ಯ ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಮಾಧವ ಭಂಡಾರ್ಕರ್, ಒಕ್ಕೂಟದ ಉಪಾಧ್ಯಕ್ಷರು ಗೀತಾ ದೇವಾಡಿಗ, ಸೇವಾಪ್ರತಿನಿಧಿ ಶ್ರೀಮತಿ ಅರುಣಿ, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಶಿಕ್ಷಕರಾದ ವೀರೇಶ್ ಸ್ವಾಗತಿಸಿದರು. ಸಹ ಶಿಕ್ಷಕರು ಶ್ರೀಮತಿ ವಿಮಲಾ ನಿರೂಪಿಸಿ, ಧನ್ಯವಾದವಿತ್ತರು.