ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿ, ರೂಮ್ ಅಟೆಂಡೆಂಟ್ ತರಬೇತಿ, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಕಾರ್ಯಕ್ರಮಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಮುಂದುವರೆದು ಸದರ ತರಬೇತಿ ಕಾರ್ಯಕ್ರಮಗಳಲ್ಲಿ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಅಗತ್ಯಕ್ಕಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಹಾಗೂ ಸ್ವ-ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮರು ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.