ಇಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಕಾರ್ಕಳ ಘಟಕ ದಲಿತ ಸಂಘರ್ಷ ಸಮಿತಿ ಪಾಲ್ಗೊಳ್ಳಲಿದೆ.
ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಅವರನ್ನು ಗೃಹ ಸಚಿವ ಅಮಿತ್ ಶಾ ರವರು ಸಂಸತ್‌ನಲ್ಲಿ ತುಚ್ಚವಾಗಿ ಮಾತನಾಡುವ ಮೂಲಕ ಅವಮಾನ ಮಾಡಿದ್ದು, ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಮಿತಿಗಳ ಒಕ್ಕೂಟ ವತಿಯಿಂದ ಬೆಂಗಳೂರಿ ನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ನಿನ್ನೆ ರಾತ್ರಿ ಕಾರ್ಕಳದಿಂದ ಸುಮಾರು 100 ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.