ಹೆಬ್ರಿ: ಹಿಂದೂಗಳ ಪವಿತ್ರ ಕ್ಷೇತ್ರವಾದ ಅಯೋದ್ಯೆಯಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ರಾಮದೇವರ ಪ್ರತಿಷ್ಟಾ ವರ್ಧಂತಿ ಮಹೋತ್ಸವದ ಅಂಗವಾಗಿ ಹೆಬ್ರಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಗೋಶಾಲೆಯ ಟ್ರಸ್ಟಿಗಳಾದ ವಿದ್ವಾನ್ ಪದ್ಮನಾಭ ಆಚಾರ್ಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಸೂರಿಮಣ್ಣು ಸದಾಶಿವ ಉಪಾಧ್ಯಾಯ ಮತ್ತು ಬಳಗದವರಿಂದ ಭಜನಾ ಕಾರ್ಯಕ್ರಮ, ಸಾರ್ವಜನಿಕರಿಂದ ಶ್ರೀ ರಾಮ ನಾಮ ಜಪ ಯಜ್ಞ, ನೂರೆಂಟು ದೀಪವನ್ನು ಬೆಳಗಿಸಿ, ಮಹಾಪೂಜೆ ನಡೆಸಲಾಯಿತು.
ಗೋಶಾಲೆಯ ಟ್ರಸ್ಟಿಗಳಾದ ವಿಷ್ಣುಮೂರ್ತಿ ಆಚಾರ್ಯ, ವಿಷ್ಣುಮೂರ್ತಿ ನಾಯಕ್ ಹಾಗೂ ಡಾ. ರಾಮಚಂದ್ರ ಐತಾಳ್, ಶ್ರೀಪತಿ ಭಟ್ ದೂಪದಕಟ್ಟೆ, ವೆಂಕಟರಮಣ ಕಲ್ಕೂರ್ ಉಪ್ಪಳ, ಗಿಲ್ಲಾಳಿ ಪರಿಸರದ ಭಗವದ್ಭಕ್ತರು ಉಪಸ್ಥಿತರಿದ್ದರು.