ಕಾರ್ಕಳಹೆಬ್ರಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ ರೂ.13.00 ಕೋಟಿ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಮಾನ್ಯ ಶಾಸಕರಾದ ವಿ ಸುನಿಲ್ ಕುಮಾರ್ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪರಿಣಾಮವಾಗಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಒಟ್ಟು ರೂ. 13.00 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.


ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ
1. ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆ ವರೆಗೆರಸ್ತೆಯ ನವೀಕರಣಗೊಳಿಸುವುದು. ರೂ.120.00ಲಕ್ಷ
2. ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದು. ರೂ. 150.00 ಲಕ್ಷ
3. ಕಾಂಜರಕಟ್ಟೆ – ಇನ್ನಾ – ಸಾಂತೂರು ಕೊಪ್ಪ ಮುಂಡೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು. ರೂ 100.00 ಲಕ್ಷ
4. ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆ ವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು. ರೂ180.00ಲಕ್ಷ
5. ಅಜೆಕಾರು-ಹೆರ್ಮುಂಡೆ-ಜಾರ್ಕಳ-ಕೆರ್ವಾಶೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವುದು. 250.00
6. ದುರ್ಗಾ-ಮುಂಡ್ಲಿ-ಶಿರ್ಲಾಲು ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವುದು. ರೂ. 250.00 ಲಕ್ಷ
7. ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಿಸುವುದು ರೂ 100.00 ಲಕ್ಷ
8. ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯನ್ನು (ಬರಬೈಲು) ಮರುನಿರ್ಮಿಸುವುದು. ರೂ. 150.00 ಲಕ್ಷ.

 

Related posts

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ – ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ

Madhyama Bimba

ಕ್ರೈಸ್ಟ್‌ಕಿಂಗ್: ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ-2024

Madhyama Bimba

ಜೆ.ಇ.ಇ (ಮೈನ್) ಫಲಿತಾಂಶ: ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More