ಕುಕ್ಕುಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಮತಿ ಮಾಲತಿ ಭಂಡಾರಿ ಅವರಿಗೆ ಸನ್ಮಾನ ಮಾಡಿ ಬೀಳ್ಕೊಡುವ ಕಾರ್ಯಕ್ರಮ ಜ. 30ರಂದು ನಡೆಯಿತು.
ಎಸ್. ಡಿ. ಯಂ. ಸಿ. ಅಧ್ಯಕ್ಷರ ಹಾಗೂ ಸದಸ್ಯರ ನೇತೃತ್ವದಲ್ಲಿ ಮತ್ತು ಹಳೇವಿದ್ಯಾರ್ಥಿ ಸಂಘ, ಮತ್ತು ಗಣೇಶೋತ್ಸವ ಸಮಿತಿಯ ಸಹ ಭಾಗಿತ್ವ ದಲ್ಲಿ ಕಾರ್ಯಕ್ರಮ ನಡೆಯಿತು.
ಇವರು ಸುಮಾರು 22 ವರ್ಷ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸುತ್ತಿದ್ದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವೀಂದ್ರ ನಾಯ್ಕರವರು ಅಧ್ಯಕ್ಷತೆ ವಹಿಸಿದ್ದರು.
ಶ್ರೀಮತಿ ಯಶೋದಾ ಹೆಗ್ಡೆ ಮತ್ತು ಮುಖ್ಯೋಪಾಧ್ಯಾಯರಾದ ದಯಾನಂದ ನಾಯಕ್ ಮಾತನಾಡಿ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಡ್ತಲ ಗ್ರಾಮ ಪಂಚಾಯತಿಯ ಸದಸ್ಯರಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀಮತಿ ರೇಖಾ, ಸಾರ್ವಜನಿಕ ಗಣೇಶೋತ್ಸವ ಸಮಿತಿ ದೊಂಡೆರಂಗಡಿ ಇದರ ಅಧ್ಯಕ್ಷರಾದ ಅಖಿಲೇಶ್ ಶೆಟ್ಟಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ದಯಾನಂದ ನಾಯಕ್ ಸ್ವಾಗತಿಸಿದರು. ಸಹ ಶಿಕ್ಷಕರಾದ ರಾಮ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ರಂಜಿತಾ ಕಾರ್ಯಕ್ರಮ ನಿರೂಪಿಸಿದರು.
ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರ ವೃಂದದವರು ಈ ಸಂದರ್ಭದಲ್ಲಿದ್ದರು.