ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಸೈಬರ್ ಸೆಕ್ಯುರಿಟಿ ಅಂಡ್ ಇಂಟರ್‌ನೆಟ್ ಸೇಫ್ಟಿ ವಿಷಯದ ಕುರಿತು ಕಾರ್ಯಾಗಾರವು ಫೆಬ್ರವರಿ 5 ರಿಂದ 7 ರವರೆಗೆ ಒಟ್ಟು ಮೂರು ದಿನಗಳ ಕಾಲ ಅಕಾಡೆಮಿಯ ಕೇಂದ್ರ ಕಚೇರಿಯಾದ ಬೆಂಗಳೂರಿನ ವಿದ್ಯಾರಣ್ಯಪುರದ ಜಿ.ಕೆ.ವಿ.ಕೆ ಆವರಣದ ಪ್ರೊ.ಯು.ಆರ್ ರಾವ್ ವಿಜ್ಞಾನ ಭವನದಲ್ಲಿ ನಡೆಯಲಿದೆ.
ಕಾರ್ಯಾಗಾರದಲ್ಲಿ ಸೈಬರ್ ಸೆಕ್ಯುರಿಟಿ ಅಂಡ್ ಇಂಟರ್‌ನೆಟ್ ಸೇಫ್ಟಿ ಬಗ್ಗೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತ ಪ್ರತಿನಿಧಿಗಳು ಫೆಬ್ರವರಿ 03 ರ ಒಳಗಾಗಿ ಗೂಗಲ್ ಫಾರ್ಮ್ https://forms.gle/9Fds6N5vjzLpjNGX7 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9620767819, 9686449019 ಅಥವಾ ಅಕಾಡೆಮಿಯ ವೆಬ್‌ಸೈಟ್ http://kstacademy.inಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.