ಕಾರ್ಕಳಹೆಬ್ರಿ

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25ನೇ ಸಾಲಿನ ಆಯವ್ಯಯ ದಲ್ಲಿ ಈ ಯೋಜನೆ ಘೋಷಿಸಿದ್ದರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.


ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ,
ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,
ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್
ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾ ಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್ ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿ ಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿ ಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

 

Related posts

ಫೆ.23ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ ಪಂದ್ಯಾಟ

Madhyama Bimba

ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

Madhyama Bimba

ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More