ಜಾರ್ಕಳ: ಶಾಂತಿ ಯುವಕ ವೃಂದ (ರಿ.) ಜಾರ್ಕಳ ಕುಕ್ಕುಂದೂರು ಇದರ 43ನೇ ವಾರ್ಷಿಕೋತ್ಸವವು ಇಂದು (ಫೆ.08)ರಂದು ಜಾರ್ಕಳ ಸಂಘದ ವಠಾರದಲ್ಲಿ ನಡೆಯಲಿದೆ.
ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ವಿದ್ಯಾರ್ಥಿಗಳಿಂದ ಹಾಗೂ ಸಂಘದ ಸದಸ್ಯರಿಂದ ವಿವಿಧ ವಿನೋದಾವಳಿಗಳು ನಡೆಯಲಿದೆ.
ಪಿಂಗಾರ ಕಲಾವಿದರು ಬೆದ್ರ ಇವರಿಂದ ‘ಕದಂಬ’ ನಾಟಕ ಪ್ರದರ್ಶನಗೊಳ್ಳಲಿದೆ.