ಪಡಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಮಕ್ಕಳ ಹಕ್ಕುಗಳ ಕ್ಯಾಲೆಂಡರ್ ಬಿಡುಗಡೆ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಕುರಿತು ಅರಿವು ಕಾರ್ಯಕ್ರಮವು ಕಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 5ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಅಮ್ಮನ ನೆರವು ಟ್ರಸ್ಟ್‌ನ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಶೋಭಾ ಭಾಸ್ಕರ್ ಮೊಬೈಲ್ ಬಳಕೆಯ ದುಷ್ಪರಿಣಾಮದ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಗೀತ, ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್, ಪಡಿ ಸಂಸ್ಥೆಯ ಸಂಯೋಜಕಿ ಮಮತಾ ರೈ ಉಪಸ್ಥಿತರಿದ್ದರು.
ಶಾಲಾಶಿಕ್ಷಕಿ ನಮಿತಾ ಸ್ವಾಗತಿಸಿ ಧನ್ಯವಾದವಿತ್ತರು.