ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ. ಬೆದ್ರ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಶನೀಶ್ಚರ ಪೂಜೆ, ಧಾರ್ಮಿಕ ಸಭೆ, ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಫೆ. 15ರಂದು ಸಾಯಂಕಾಲ ಗಂಟೆ 4.00ಕ್ಕೆ ದರೆಗುಡ್ಡೆ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜರಗಲಿದೆ.
ಮುಂಬೈ ಉದ್ಯಮಿ ನಾರಾಯಣ ಕೆ. ಶೆಟ್ಟಿ ಅವರ ಸಮಾಜಮುಖಿ ಸೇವೆಗಾಗಿ ‘ಸಮಾಜಸೇವಾ ರತ್ನ ಪ್ರಶಸ್ತಿ’, ಮೂಡುಬಿದಿರೆ ಉದ್ಯಮಿ ರಾಜೇಶ್ ಎಂ. ಕೋಟ್ಯಾನ್ ಅವರಿಗೆ ‘ಉದ್ಯಮ ರತ್ನ ಪ್ರಶಸ್ತಿ’ ಪ್ರದಾನ ನಡೆಯಲಿದೆ. ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಲಿರುವ ವಿಘ್ನೇಶ್ ಶೆಟ್ಟಿ ರಾಷ್ಟ್ರಮಟ್ಟದ 600ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಸುಮಂತ್ ಎಸ್ ಅವರಿಗೆ ಗೌರವಾರ್ಪಣೆ ನಡೆಯಲಿದೆ.
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ ಅಸೋಸಿಯೇಶನ್‌ನ ಅಧ್ಯಕ್ಷ ರವೀಂದ್ರ ಶೆಟ್ಟಿ ವಹಿಸಲಿದ್ದು, ಯುವ ನ್ಯಾಯವಾದಿ ಶರತ್ ಶೆಟ್ಟಿ ಉದ್ಘಾಟನೆಗೈಯಲಿದ್ದಾರೆ. ಶಾಸಕ ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಉದ್ಯಮಿಗಳಾದ ಹುರ್ಲಾಡಿ ರಘುವೀರ ಎ. ಶೆಟ್ಟಿ, ನಾರಾಯಣ ಕೆ. ಶೆಟ್ಟಿ, ಬಿಜೆಪಿ ಮುಖಂಡ ಕೆ.ಪಿ. ಜಗದೀಶ ಅಧಿಕಾರಿ, ಪಂಚಶಕ್ತಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜಿತ್ ಪೂಜಾರಿ ತೋಡಾರು, ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ, ಉದ್ಯಮಿ ವಿಜೇಶ್ ಕುಕ್ಯಾನ್, ಹಿಂಜಾವೇ ಮೂಡುಬಿದಿರೆ ತಾಲೂಕು ಸಂಯೋಜಕ ಹರೀಶ್ಚಂದ್ರ ಕೆ.ಸಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಂದು ಸಾಯಂಕಾಲ 4.00 ಗಂಟೆಗೆ ವೇದಮೂರ್ತಿ ನಾಗರಾಜ್ ಭಟ್ ನೇತೃತ್ವದಲ್ಲಿ ಶನೀಶ್ಚರ ಪೂಜೆ, ಅನ್ನಸಂತರ್ಪಣೆ, ಶಾಲಾ ಮಕ್ಕಳು ಹಾಗೂ ಕಲಾವಿದರಿಂದ ನೃತ್ಯ ಸಿಂಚನ, ಸಪ್ತಸ್ವರ ಮೆಲೋಡೀಸ್ ವಾಮದಪದವು ಮತ್ತು ಕಟೀಲೇಶ್ವರೀ ಮೆಲೋಡೀಸ್ ಕೆಲ್ಲಪುತ್ತಿಗೆ ಇವರಿಂದ ಸಂಗೀತ ರಸಮಂಜರಿ, ಸಭಾಕಾರ್ಯಕ್ರಮದ ನಂತರ ದಿ| ಸುರೇಂದ್ರ ಕುಮಾರ್ ಕಲತ್ರಪಾದೆ ವಿರಚಿತ ತುಳು ಸಾಮಾಜಿಕ ನಾಟಕ ‘ದೇವೆರ್ ಮುನಿಂಡ’ ಪ್ರದರ್ಶನಗೊಳ್ಳಲಿದೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸುವಂತೆ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಮಿತ್‌ರಾಜ್ ದರೆಗುಡ್ಡೆ, ಗೌರವಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಅಧ್ಯಕ್ಷ ಸದಾನಂದ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಬೇಬಿ ಚಿದಾನಂದ ಕುಕ್ಯಾನ್ ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.