ಕಾರ್ಕಳ : ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2025 ಪ್ರಥಮ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ದ್ವಿತೀಯ ವಿಜ್ಞಾನ ವಿಭಾಗದ ಅನಂತ್ ಎನ್. ಕೆ 99.0927 ಪರ್ಸೆಂಟೈಲ್ ಪಡೆದುಕೊಳ್ಳುವುದರ ಮೂಲಕ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದೆ.
ಭೌತಶಾಸ್ತ್ರದಲ್ಲಿ 98.6068, ರಸಾಯನಶಾಸ್ತ್ರದಲ್ಲಿ 99.3449, ಗಣಿತಶಾಸ್ತ್ರದಲ್ಲಿ 97.2966 ಅಂಕಗಳನ್ನು ಪಡೆದುಕೊಂಡು ಒಟ್ಟಾರೆ 99.0927 ಪರ್ಸೆಂಟೈಲ್ ಅಂಕಗಳನ್ನು ಪಡೆದುಕೊಂಡಿರುವ ಅನಂತ್ ಎನ್ ಕೆ ಸಂಸ್ಥೆಗೆ ಕೀರ್ತಿ ತಂದಿದ್ದಾನೆ.
ಸಂಸ್ಥೆಯಿಂದ ಒಟ್ಟು ಎಂಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ ಅನಂತ್ 99 ಕ್ಕಿಂತ ಹೆಚ್ಚಿನ ಪರ್ಸೆಂಟೈಲ್ ಪಡೆದುಕೊಂಡಿರುವುದು ವಿಶೇಷ ಸಾಧನೆಯಾಗಿದೆ.