ಹೆಬ್ರಿ : ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಬ್ರಿ ತಾಲ್ಲೂಕು ಕಛೇರಿ ಆವರಣದಲ್ಲಿ ಮುಷ್ಕರ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವಂತೆ ಪಂಚಾಯಿತಿರಾಜ್ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಅವರು ಗುರುವಾರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ನೀಡಿದ್ದಾರೆ.
ಇತ್ತೀಚೆಗೆ ಹೆಚ್ಚಾಗಿ ಮಹಿಳೆಯರೇ ಗ್ರಾಮ ಆಡಳಿತಾಧಿಕಾರಿಗಳಿದ್ದು ಅವರಿಗೆ ಮೂಲಸೌಕರ್ಯಗಳನ್ನು ನೀಡಲೇಬೆಕಾಗಿದೆ. 1956ರಲ್ಲಿ ಇದ್ದ ಗ್ರಾಮ ಕಂದಾಯ ವೃತ್ತವನ್ನು ಬದಲಿಸಿ ಕನಿಷ್ಠ ಗ್ರಾಮ ಪಂಚಾಯಿಗೆ 1ರಂತೆ ಗ್ರಾಮ ಆಡಳಿತಾಧಿಕಾರಿಗಳ ನೇಮಕ ಮಾಡುವಂತೆ ನೀರೆ ಕೃಷ್ಣ ಶೆಟ್ಟಿ ಒತ್ತಾಯಿಸಿದ್ದಾರೆ.