ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರಂದು ನಡೆಯುವ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಧ್ವಜಕಟ್ಟೆಗೆ ವಿವಿಧ ಬಗೆಯ ಫಲಪುಷ್ಪಗಳಿಂದ ಅಲಂಕರಿಸಲಾಗಿದ್ದು, ಚಂದ್ರಮಂಡಲೋತ್ಸವ ಹಾಗೂ ಬಲಿಮೂರ್ತಿ ಮೆರವಣಿಗೆ ನಡೆಯಿತು. ಬಳಿಕ ಮುಂಡ್ಕೂರು ಸಂಕಲಕರಿಯ ದೊಡ್ಡಮನೆ ಕುಟುಂಬಸ್ಥರ ಸೇವಾ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ, ಪವಿತ್ರಪಾಣಿ ರಾಮ ಮಡ್ಮಣ್ಣಾಯ, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು, ವ್ಯವಸ್ಥಾಪನ ಸಮಿತಿಯ ಸದಸ್ಯರು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ವಾದಿರಾಜ ಶೆಟ್ಟಿ ಹಾಗೂ ಮುಂಡ್ಕೂರು, ಮುಲ್ಲಡ್ಕ, ಇನ್ನಾ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.