ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಯ್ಯಪ್ಪನಗರ ಅಂಗನವಾಡಿ ಕೇಂದ್ರದ ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ಅಂಗನವಾಡಿ ಕಟ್ಟಡವನ್ನು ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಗೆ ಅಯ್ಯಪ್ಪನಗರ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.