ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಚುನಾವಣಾ ದಿನದಿಂದ ಮುಂದಿನ ೫ ವರ್ಷ ಅಂದರೆ 2025ರಿಂದ 2030ರ ಅವಧಿಗೆ ಅಧ್ಯಕ್ಷರಾಗಿ ಕೆ. ಜೈರಾಜ್ ಬಿ. ರೈ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮಿಜಯಪಾಲ ಶೆಟ್ಟಿ ಅವಿರೋಧವಾಗಿ ಪುನರಾಯ್ಕೆಯಾಗಿರುವುದನ್ನು ಫೆ. 15ರ ಸಂಘದಪದಾಧಿಕಾರಿ ಚುನಾವಣೆಯಲ್ಲಿ ಚುನಾವಣಾಧಿಕಾರಿಯವರಾದ ನವೀನ್ ಕುಮಾರ್ ಎಂ.ಎಸ್‌ರವರು ಪ್ರಕಟಿಸಿರುತ್ತಾರೆ.
ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾದ ಕೆ. ಜೈರಾಜ್ ಬಿ. ರೈಯವರು ಸಹಕಾರ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವವುಳ್ಳವರಾಗಿದ್ದಾರೆ ಹಾಗೂ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
ಆಡಳಿತ ಮಂಡಳಿ ನಿರ್ದೇಶಕರಾಗಿ ಶ್ರೀಮತಿ ಎ. ರತ್ನಕಾಂತಿ ಶೆಟ್ಟಿ, ಸರ್ವಶ್ರೀ ಕೆ. ಸೀತಾರಾಮ ರೈ ಸವಣೂರು, ಡಾ| ಕೆ. ಸುಭಾಶ್ಚಂದ್ರ ಶೆಟ್ಟಿ, ಪಿ. ಶಿವರಾಮ ಅಡ್ಯಂತಾಯ, ಸಿಎ. ಎಚ್. ಆರ್. ಶೆಟ್ಟಿ, ವಿಠಲ ಪಿ. ಶೆಟ್ಟಿ, ಯಂ. ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ. ಬಿ. ದಿವಾಕರ ರೈ, ರವೀಂದ್ರನಾಥ ಜಿ. ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಎ. ಚಿಕ್ಕಪ್ಪ ನಾಕ್ ಮತ್ತು ಡಾ| ಬಿ. ಸಂಜೀವ ರೈರವರು ಫೆ. 02 ರಂದು ಜರಗಿದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿರುತ್ತಾರೆ.