ಕಾರ್ಕಳ

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮುಷ್ಕರಕ್ಕೆ ವಿ. ಸುನಿಲ್ ಕುಮಾರ್ ಭೇಟಿ

 

ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕಾರ್ಕಳ ಶಾಸಕರು, ಮಾಜಿ ಸಚಿವರಾದ ವಿ ಸುನಿಲ್ ಕುಮಾರ್‌ರವರು ಭೇಟಿ ನೀಡಿದರು.


ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತುಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶನಿವಾರ 6ನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೂ ಸರ್ಕಾರ ಮಾತ್ರ ಇವರ ಬೇಡಿಕೆಗಳಿಗೆ ಸ್ಪಂದಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜನಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.


ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಈ ಮುಷ್ಕರದಲ್ಲಿ ಭಾಗವಹಿಸಿದ್ದು, ರಾಜ್ಯಾದ್ಯಂತ ಆಯಾ ತಾಲೂಕು ಕಛೇರಿಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವುನಡೆಯುತ್ತಿದೆ ಆದರೂ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೌಜನ್ಯಕ್ಕೂ ಭೇಟಿ ನೀಡಿ ಅಧಿಕಾರಿಗಳ ಬೇಡಿಕೆಗಳನ್ನು ಆಲಿಸಿರುವುದಿಲ್ಲ. ಸಂಬಂಧಪಟ್ಟ ಇಲಾಖಾ ಸಚಿವರು ಹಾಗೂ ಸರ್ಕಾರ ಗ್ರಾಮ ಆಡಳಿತಅಧಿಕಾರಿಗಳ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೆ ಕಿವಿ ಕೇಳದಂತೆ-ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದು, ಇದೊಂದು ಸಂವೇದನಾ ಶೀಲ ರಹಿತ ಸರ್ಕಾರವಾಗಿರುತ್ತದೆ. ಮುಷ್ಕರ ಇದೇ ರೀತಿ ಮುಂದುವರೆದರೆ ಸಾರ್ವಜನಿಕರಿಗೆ ದೊರೆಯುವಂತ ಸೇವೆಯಲ್ಲಿ ಅವಶ್ಯಕವಾಗಿ ಬೇಕಾಗಿರುವ ಜಾತಿ ಆದಾಯಪ್ರಮಾಣ ಪತ್ರಗಳ ಸೇವೆಯಲ್ಲಿ ವ್ಯತ್ಯಯ ಕಂಡುಬಂದು ಸಾರ್ವಜನಿಕರು ತೊಂದರೆಗೊಳಪಡುತ್ತಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ.


ಬಹುತೇಕ ಗ್ರಾಮಆಡಳಿತ ಅಧಿಕಾರಿಗಳ ಕಚೇರಿಗಳು ಶಿಥಿಲಾವಸ್ಥೆಯಿಲ್ಲಿದ್ದು, ಹೊಸ ಅಥವಾ ನವೀಕೃತ ಕಟ್ಟಡ, ಗುಣಮಟ್ಟದ ಪೀಠೋಪಕರಣಗಳು, ದಾಖಲೆಗಳ ಅಪ್ ಲೋಡ್‌ಗಳಿಗೆ ಗುಣಮಟ್ಟದ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಪ್ರಿಟ್ರ್ ಹಾಗೂ ಸ್ಕ್ಯಾನರ್ ಪೂರೈಸುವಂತೆ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೇ ಕಂದಾಯ ಇಲಾಖೆಯ ಒಟ್ಟು 21 ಮೊಬೈಲ್ ತಂತ್ರಾಂಶಗಳ ನಿರ್ವಹಣೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನಿಗದಿಪಡಿಸಬೇಕು. ನೌಕರರಿಗೆ ಅಂತರ್ ಜಿಲ್ಲಾ ವರ್ಗಾವಣೆ ಅಥವಾ ಇತರೇ ಇಲಾಖೆಗಳಂತೆ ವರ್ಗಾವಣೆಗೆ ವಿಶೇಷ ಮಾರ್ಗಸೂಚಿ ರಚಿಸಬೇಕು.

ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 50.00ಲಕ್ಷರೂ ಪರಿಹಾರ ನೀಡುವಂತೆ ಮನವಿಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ. ಇದಲ್ಲದೇ ಚುನಾವಣೆ, ಅತಿವೃಷ್ಟಿ, ಅನಾವೃಷ್ಟಿ ಸಂದರ್ಭಗಳಲ್ಲಿಹಾಗೂ ಸಾರ್ವಜನಿಕ ಸೇವೆಗಳನ್ನು ನೀಡುವ ಸಂದರ್ಭದಲ್ಲಿ ದೈಹಿಕಹಲ್ಲೆ, ಕೊಲೆಪ್ರಕರಣಗಳು ನಡೆಯುತ್ತಿದ್ದು, ಆದ್ದರಿಂದ 3 ಸಾವಿರರೂ ಆಪತ್ತಿನ ಭತ್ಯೆ ನೀಡುವಂತೆ ಆಗ್ರಹಿಸಿದ್ದಾರೆ.

ಇನ್ನುಳಿದಂತೆ ಪೊಲೀಸ್ ಇಲಾಖೆಯಲ್ಲಿನೀಡುತ್ತಿರುವ ಒಂದು ತಿಂಗಳ ಹೆಚ್ಚುವರಿ ವೇತನ ಹಾಗೂ ಹಾಲಿ ಪ್ರಯಾಣ ಭತ್ಯೆ 500 ರೂಪಾಯಿಯನ್ನು 5 ಸಾವಿರಕ್ಕೆ ಏರಿಸುವಂತೆ, ವಂಶವೃಕ್ಷ, ಜಾತಿಪ್ರಮಾಣ ಪತ್ರಗಳ ವಿತರಣೆ ಸಂದರ್ಭದಲ್ಲಿ ತಪ್ಪು ಮಾಹಿತಿನೀಡಿದ ಅರ್ಜಿದಾರರ ಬದಲಿಗೆ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಿಸುತ್ತಿದ್ದು ಇದರ ಬದಲಿಗೆ ಅರ್ಜಿದರರನ್ನೇ ಹೊಣೆಗಾರರಾಗಿಸಬೇಕು. ಬೆಳೆಸಮೀಕ್ಷೆ ಬೆಳೆ ಪರಿಹಾರದ ಕೆಲಸವನ್ನು ಕೃಷಿ ಅಥವಾ ತೋಟಗಾರಿಕೆಗೆ ವಹಿಸುವಂತೆ ನಿರ್ದೇಶಿಸಬೇಕು, ಮ್ಯುಟೇಶನ್ ಅವಧಿ ವಿಸ್ತರಣೆ, ಪ್ರೊಟೊಕಾಲ್ ಕೆಲಸದಿಂದವಿನಾಯಿತಿ ಹಾಗೂ ದವರ್ ಮತ್ತು ಜಮಾಬಂದಿಯನ್ನು ರದ್ದುಪಡಿಸಬೇಕು ಮಾತ್ರವಲ್ಲದೇ ಗ್ರಾಮ ಸಹಾಯಕರಿಗೆ ಸೇವಾಭದ್ರತೆ ಒದಗಿಸುವ ಬೇಡಿಕೆಯನ್ನು ಈಡೇರಿಸಬೇಕೆಂದು ಒಟ್ಟು 23 ಅಂಶಗಳನ್ನು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ, ಶೀಘ್ರ ಸರ್ಕಾರದ ಗಮನಕ್ಕೆ ತರುತ್ತೇನೆ. ಮಾತ್ರವಲ್ಲದೇ, ಮುಂದಿನ ಆಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆಯುತ್ತೇನೆ ಎಂಬ ಭರವಸೆಯ ಮಾತನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ನೀಡಿದರು. ಅವರ ಎಲ್ಲಾಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಿ, ಶೀಘ್ರವೇ ಪರಿಹಾರ ಕ್ರಮ ಕೈಗೊಂಡು ಪ್ರತಿಭಟನೆ ಹಿಂಪಡೆಯುವಂತೆ ಪ್ರತಿಭಟನಾಕಾರರ ಮನವೊಲಿಸಿ, ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗುವಂತೆ ನೋಡಿಕೊಳ್ಳಬೇಕು ಎಂದು ಕಾರ್ಕಳ ಶಾಸಕರು, ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಸರ್ಕಾರವನ್ನು ಆಗ್ರಹಿಸುತ್ತಾರೆ.

Related posts

ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಸಿರಿಯಣ್ಣ ಶೆಟ್ಟಿ ಹಿರ್ಗಾನ ಉಪಾಧ್ಯಕ್ಷರಾಗಿ ರವೀಂದ್ರ ಕುಮಾರ್ ಕುಕ್ಕುಂದೂರು

Madhyama Bimba

ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

Madhyama Bimba

ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More