ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ ಸಭೆಯ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಕುರಿತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮನವಿ ಪತ್ರವನ್ನು ನೀಡಿ ವಿನಂತಿಯನ್ನು ಮಾಡಿದರು.
ಕಾರ್ಕಳ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗ ಬೇಕಿದೆ. ಈಗಾಗಲೇ ಜನರು ತಮ್ಮ ಗ್ರಾಮದಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುನಿಯಾಲು ಉದಯ ಶೆಟ್ಟಿಯವರ ಬಳಿ ವಿನಂತಿ ಮಾಡಿದ್ದರು.
ಹಲವಾರು ಗ್ರಾಮಗಳ ಜನರ ಮನವಿಯನ್ನು ಒಗ್ಗೂಡಿಸಿದ ಅವರು ಸಚಿವರ ಬಳಿ ಈ ಬಗ್ಗೆ ಪ್ರಸ್ತಾಪ ಮಾಡಿ ಅನುದಾನ ಮಂಜೂರು ಮಾಡುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ
ಶೀಘ್ರದಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಅನುದಾನ ಮಂಜೂರು ಮಾಡುತ್ತೇನೆ ಎಂದು ಸಚಿವರು ಉದಯ ಶೆಟ್ಟಿಯವರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ
previous post
next post