ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಫೆ. 19ರಂದು ಇದೀಗ ನಡೆದಿದ್ದು, ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಕಾರು ಉಡುಪಿಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದು, ಬೈಕ್ ಕಾರ್ಕಳ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಕಾರು ಚಾಲಕನ ಅತೀ ವೇಗ ಹಾಗೂ ಅಜಾಕರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಈರ್ವರು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.